Vichara

Ambiga Naa Ninna ಅಂಬಿಗಾ ನಾ ನಿನ್ನ ನಂಬಿದೇ

ganga-600x400

Ambiga Naa Ninna ಅಂಬಿಗಾ ನಾ ನಿನ್ನ ನಂಬಿದೇ

ಅಂಬಿಗಾ ನಾ ನಿನ್ನ ನಂಬಿದೇ
ಜಗದಂಬರಮಣ ನಿನ್ನ ನಂಬಿದೇ

ತುಂಬಿದ ಹರಿಗೋಲಂಬಿಗ ಅದ ಕೊಂಬತ್ತು ಛಿದ್ರವು ಅಂಬಿಗಾ
ಸಂಭ್ರಮದಿಂ ನೊಡಂಬಿಗ ಅದರಿಂಬು ನೊಡೀ ನಡೆಸಂಬಿಗಾ  || 1 ||

ಹೊಳೆಯ ಭರವ ನೊಡಂಬಿಗಾ ಅದಕೆ ಸೆಳವು ಘನವೈಯ್ಯ ಅಂಬಿಗಾ
ಸುಳಿಯೊಳು ಮುಳುಗಿದೆ ಅಂಬಿಗ ಎನ್ನ ಸೆಳೆದುಕೊಂಡೊಯ್ಯೊ ನೀನಂಬಿಗ || 2 ||

ಆರು ತೆರೆಯ ನೋಡಂಬಿಗ ಅದು ಮೀರಿ ಬರುತಲಿದೆ ಅಂಬಿಗ
ಯಾರಿಂದಲಾಗದು ಅಂಬಿಗ ಅದ ನಿವಾರಿಸಿ ದಾಟಿಸೊ ಅಂಬಿಗ || 3 ||

ಸತ್ಯವೆಂಬುದೆ ಹುಟ್ಟಂಬಿಗ ಸದಾ ಭಕ್ತಿಯೆಂಬುದೆ ಪಥವಂಬಿಗಾ
ನಿತ್ಯ ಮುರುತಿ ಪುರಂದರ ವಿಟ್ಠಲ ನಮ್ಮಾ ಮುಕ್ತಿಮಂಟಪಕೊಯ್ಯೊ ಅಂಬಿಗ || 4 ||

2 Comments
satta king